Home ರಾಜ್ಯ ಬಜೆಟ್ ಎಫೆಕ್ಟ್: ಅಬಕಾರಿ ಇಲಾಖೆಗೆ 36,500 ಕೋಟಿ ಗುರಿ ನಿಗದಿ; ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ...

ಬಜೆಟ್ ಎಫೆಕ್ಟ್: ಅಬಕಾರಿ ಇಲಾಖೆಗೆ 36,500 ಕೋಟಿ ಗುರಿ ನಿಗದಿ; ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಆಘಾತ!

ಸಾಂದರ್ಭಿಕ ಚಿತ್ರ

ಬೆಂಗಳೂರು: 2025-26 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮದ್ಯ ಪ್ರಿಯರಿಗೆ ಮತ್ತೊಮ್ಮೆ ಆಘಾತ ನೀಡಿದ್ದಾರೆ.

ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಗುರಿ ನಿಗದಿ ಮಾಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆಯಾಗಲಿದೆ.

ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ ಎಂದು ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ನೆರೆಯ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಸಾರವಾಗಿ ಪ್ರೀಮಿಯಂ ಮದ್ಯದ ಬೆಲೆಗಳನ್ನು ಪರಿಷ್ಕರಿಸುವುದರೊಂದಿಗೆ ಸರ್ಕಾರವು ಅಬಕಾರಿ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸಿದೆ. 2025-26ರಲ್ಲಿಯೂ ಅಬಕಾರಿ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು. ಜೊತೆಗೆ ಮದ್ಯ ಮಾರಾಟವನ್ನು ಹೆಚ್ಚಿಸಲು ಖಾಲಿ ಇರುವ ಅಥವಾ ಲಭ್ಯವಿರುವ ಪರವಾನಗಿಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್​ ಹರಾಜಿನ ಮೂಲಕ ಹಂಚಿಕೆ ಮಾಡಲಾಗುವುದು. ಇದರಿಂದ ಹೆಚ್ಚುವರಿ ಆದಾಯ ಸಂಗ್ರಹಣೆ ಗುರಿ ಹೊಂದಲಾಗಿದೆ ಎಂದಿದ್ದಾರೆ.

ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ತಂತ್ರಾಂಶವನ್ನು ರೂಪಿಸಲಾಗುವುದು. ಇದರಿಂದ ಆಡಳಿತದಲ್ಲಿ ದಕ್ಷತೆ ಹೆಚ್ಚಲಿದೆ. ಸಾರ್ವಜನಿಕ ಸೇವೆ ಸುಧಾರಿಸಲಿದೆ ಎಂದು ತಿಳಿಸಿದ್ದಾರೆ.

 

 
Previous article‘ನಾರಿ ಶಕ್ತಿ’ಗೆ ನಮೋ ನಮನ: ತನ್ನ ಎಕ್ಸ್ ಖಾತೆಯನ್ನು ಸಾಧಕ ಮಹಿಳೆಯರಿಗೆ ವಹಿಸಿದ ಪ್ರಧಾನಿ ಮೋದಿ
Next articleಪತ್ರಕರ್ತರ ಮಾಸಾಶನ ಏರಿಕೆ; ಮಾಧ್ಯಮ ಸಂಜೀವಿನಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ