Home ಸುದ್ದಿಗಳು ರಾಜ್ಯ ಕುಟುಂಬ ಸಮೇತರಾಗಿ ಕುಂಭಮೇಳದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿಕುಮಾರ್

ಕುಟುಂಬ ಸಮೇತರಾಗಿ ಕುಂಭಮೇಳದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿಕುಮಾರ್

0
ಕುಟುಂಬ ಸಮೇತರಾಗಿ ಕುಂಭಮೇಳದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿಕುಮಾರ್

ಪ್ರಯಾಗರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಭಾಗವಹಿಸಿದ್ದಾರೆ. ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಡಿ.ಕೆ.ಶಿವಕುಮಾರ್, “ಹರ ಹರ ಮಹಾದೇವ! ನಾನು ನನ್ನ ಕುಟುಂಬದೊಂದಿಗೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿರುವುದಕ್ಕೆ ನನಗೆ ನಿಜವಾಗಿಯೂ ಸಂತೋಷವಾಗಿದೆ” ಎಂದಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಂಘಟಕರ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

“ಪವಿತ್ರ ಸ್ನಾನವನ್ನು ಅಚ್ಚುಕಟ್ಟಾಗಿ ನಡೆಸಿದ ಎಲ್ಲಾ ಸಂಘಟಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ, ಇದು ಪ್ರತಿಯೊಬ್ಬರ ಜೀವನದ ಒಂದು ಐತಿಹಾಸಿಕ ಕ್ಷಣವಾಗಿದೆ, ಇಲ್ಲಿಯ ವ್ಯವಸ್ಥೆಯನ್ನು ನೋಡುತ್ತಿದ್ದರೆ, ಇಲ್ಲಿಗೆ ಭೇಟಿ ನೀಡುವ ಕೋಟ್ಯಂತರ ಜನರಿಗಾಗಿ ಏನೆಲ್ಲಾ ಮಾಡಿದ್ದಾರೆ ಎನ್ನುವುದು ಗೊತ್ತಾಗುತ್ತಿದೆ. ಇದು ಸಣ್ಣ ಕೆಲಸವಲ್ಲ. ಸಂಘಟನೆ ಹೇಗೆ ಕೆಲಸ ಮಾಡುತ್ತದೆ ಎನ್ನುವುದು ತಿಳಿದಿದೆ” ಎಂದು ಅವರು ವ್ಯವಸ್ಥೆಯ ಬಗ್ಗೆ ಬಾಯಿ ತುಂಬಾ ಹೊಗಳಿದ್ದಾರೆ.

ಡಿ.ಕೆ.ಶಿ ಅವರ ಈ ನಡೆಯು ಜನರ ಹುಬ್ಬೇರುವಂತೆ ಮಾಡಿದೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾಕುಂಭಮೇಳವನ್ನು ಲೇವಡಿ ಮಾಡುತ್ತಾ ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಬಡತನ ತೊಲಗುತ್ತಾ ಎಂದು ಕುಟುಕಿದ್ದರು. ಈಗ ಅದೇ ಮಾತುಗಳನ್ನು ನೆಟ್ಟಿಗರು ವಾಪಾಸು ಕುಟುಕುತ್ತಿದ್ದಾರೆ.

 

 

LEAVE A REPLY

Please enter your comment!
Please enter your name here