
ಬೆಳಗಾವಿ: ಶಿರೂರು ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿರುವುದಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ನವದೆಹಲಿ ಪ್ರವಾಸದಲ್ಲಿರುವ ಹೆಬ್ಬಾಳ್ಕರ್, ಘಟನೆ ಕುರಿತಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದು, ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವಂತೆ ಮತ್ತು ಆದಷ್ಟು ಬೇಗ ಸೂಕ್ತ ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
