
ತುಮಕೂರು: ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಅವರು ಇಂದು ಮಾತನಾಡಿ, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ.
ಕೊಲೆಯಾದ ಸ್ನೇಹ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ, ಬಿವಿಬಿ ಕಾಲೇಜಿನಲ್ಲಿ ಎಂಸಿಎ ಮಾಡುತ್ತಿದ್ದಳು. ಈಕೆ ಮತ್ತು ಆರೋಪಿ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್ ನೇಹಾಳ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.
