
ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ. 25ರಿಂದ ಮಾರ್ಚ್ 4ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.
ಏಕರೂಪದ ಪ್ರಶ್ನೆ ಪತ್ರಿಕೆಗಳನ್ನು ಈಗಾಗಲೇ ಸಿದ್ಧಪಡಿಸಿ, ಶಾಲಾ ಶಿಕ್ಷಣ ಇಲಾಖೆಯ ಆಯಾ ಜಿಲ್ಲೆಯ ಉಪ ನಿರ್ದೇಶಕರ ಲಾಗಿನ್‌ಗೆ ಕಳುಹಿಸಲಾಗಿದೆ. ಜಿಲ್ಲಾವಾರು ವಿಶೇಷ ಕೋಡ್ ಹೊಂದಿರುವ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಹಂತಗಳಲ್ಲೇ ಮುದ್ರಿಸಿ, ವಿದ್ಯಾರ್ಥಿಗಳಿಗೆ ನೀಡಬೇಕು. ಮುಖ್ಯ ಪರೀಕ್ಷೆಯ ಮಾದರಿಯಲ್ಲೇ ಶಿಸ್ತುಬದ್ಧವಾಗಿ ಪರೀಕ್ಷೆ ನಡೆಸಬೇಕು ಎಂದು ಮಂಡಳಿ ಹೇಳಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಮತ್ತಿತರ ಪ್ರಕರಣಗಳು ಪತ್ತೆಯಾದರೆ ಉಪ ನಿರ್ದೇಶಕರು, ಬಿಇಒಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದೆ.
