
ಕೋಲಾರ: ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತಿ ಹೊಂದಲು ಬಯಸುತ್ತಿದ್ದೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.
ಕೋಲಾರದ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿ ಕೋಲಾರ ಮೀಸಲು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ.ಇಲ್ಲಿ ಯಾವುದೇ ಮೌಲ್ಯಗಳು ಉಳಿದಿಲ್ಲ. ಹೀಗಾಗಿ ನಾನು ರಾಜಕೀಯ ಜೀವನಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡೋದಿಲ್ಲ. ನಾನಾಗಲೀ ನನ್ನ ಮಗನಾಗಲೀ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದು ನಿರ್ಧರಿಸಿದ್ದೇವೆ ಎಂದು ಭಾವುಕರಾಗಿ ನುಡಿದಿದ್ದಾರೆ.
