Home ಸುದ್ದಿಗಳು ರಾಜ್ಯ ಉಡುಪಿ: ಕಿದಿಯೂರು ಅಷ್ಟಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕಿದಿಯೂರು ಅಷ್ಟಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
ಉಡುಪಿ: ಕಿದಿಯೂರು ಅಷ್ಟಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಉಡುಪಿ ಹೊಟೇಲ್ ಕಿದಿಯೂರಿನ ಕಾರಣಿಕ ಶ್ರೀನಾಗ ಸನ್ನಿಧಿಯಲ್ಲಿ ಜ.26ರಿಂದ 31ರವರೆಗೆ ನಡೆಯಲಿರುವ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕಿದಿಯೂರು ಹೊಟೇಲ್‌ನ ಮಾಧವಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಈ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಮಠದ ಭಾವೀ ಪರ್ಯಾಯ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಬಿಡುಗಡೆ ಮಾಡಿದರು. ನಂತರ ಆಶೀರ್ವಚನ ನೀಡಿದ ಶ್ರೀಗಳು, ಜ.18ರಂದು ಶ್ರೀಕೃಷ್ಣ ಪೂಜಾ ಕೈಂಕರ್ಯದ ಪರ್ಯಾಯ ಮಹೋತ್ಸವವಾದರೆ, ಜ.26ರಿಂದ ಕಿದಿಯೂರಿ ನಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವ ಆಯೋಜನೆ ಬಹಳ ಅರ್ಥಪೂರ್ಣವಾಗಿ ಮೂಡಿ ಬರುತ್ತಿದೆ ಎಂದು ಹೇಳಿದರು.

ಈ ವೇಳೆ ವೇದಮೂರ್ತಿಜ್ಯೋತಿಷ್ಯ ವಿದ್ವಾನ್ ಕಬಿಯಾಡಿ ಜಯರಾಮ ಆಚಾರ್ಯ , ಕಿದಿಯೂರು ಹೋಟೆಲ್ ಮಾಲೀಕ ಭುವನೇಂದ್ರ ಕಿದಿಯೂರು, ಅಷ್ಟಪವಿತ್ರ ನಾಗಮಂಡಲೋತ್ಸವ ಆಯೋಜನಾ ಸಮಿತಿ ಗೌರವಾಧ್ಯಕ್ಷ ನಾಡೋಜ ಡಾ.ಜಿ. ಶಂಕರ್, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಕೊಡವೂರು, ಉದ್ಯಮಿಗಳಾದ ಪುರುಷೋತ್ತಮ್ ಪಿ. ಶೆಟ್ಟಿ, ಮನೋಹರ ಎಸ್. ಶೆಟ್ಟಿ, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಹಿರಿಯಣ್ಣ ಕಿದಿಯೂರು, ಶ್ರೀಧರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಗಣೇಶ್ ರಾವ್ ಇದ್ದರು.

 

LEAVE A REPLY

Please enter your comment!
Please enter your name here