ಉಡುಪಿ: ಜಿಲ್ಲೆಯಲ್ಲಿ ಒಟ್ಟು 85 ಶೇಕಡದಷ್ಟು ಬಿಪಿಎಲ್ ಪಡಿತರ ಕಾರ್ಡುಗಳಿದ್ದು ಅವುಗಳನ್ನು 40 ಶೇಕಡ ಇಳಿಸಬೇಕಾಗಿದೆ ಹಾಗೂ ಅವುಗಳ ನೈಜ್ಯತೆಯ ಕುರಿತಂತೆ ಈಗಾಗಲೇ ಸರ್ವೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಪಿಎಲ್ ಕಾರ್ಡ್ ಪಡೆದಿರುವ ಸರ್ಕಾರಿ ನೌಕರರಿಂದ ಕಾರ್ಡ್ ಹಿಂಪಡೆದು ದಂಡ ವಸೂಲಿ ಮಾಡಲಾಗುತ್ತದೆ ಹಾಗೂ ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದಿರುವುದು ಕಂಡು ಬಂದರೆ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದ್ದಾರೆ.
ನೈಜ ಫಲಾನುಭವಿಗಳಿಗೆ ಹಾಗೂ ಬಡವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಹಾಗೂ ಕಾನೂನಿಗೆ ವಿರುದ್ಧವಾಗಿ ಬಿಪಿಎಲ್ ಕಾರ್ಡ್ ಪಡೆದವರು ಸುಮೋಟೋ ಆಗಿ ಕಾರ್ಡನ್ನು ಹಿಂದಿರುಗಿಸಿ ಎಂದು ಮನವಿ ಮಾಡಿದ್ದಾರೆ.
