ಮಂಗಳೂರು: ಸಿಂಗಾರಿ ಬೀಡಿ ಮಾಲೀಕನ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ.
ಆದರೆ ಪೋಲೀಸ್ ವಶಕ್ಕೆ ಪಡೆದ ತಕ್ಷಣವೇ ಆರೋಪಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆರೋಪಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಧಿತ ಆರೋಪಿ ಅಪಸ್ಮಾರ ಮತ್ತು ತಲೆನೋವು ಸಮಸ್ಯೆಯಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಜನವರಿ 3 ರಂದು ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಎಂಬಾತನಿಗೆ ಮನೆಗೆ ನಕಲಿ ಇಡಿ ಅಧಿಕಾರಿಗಳ ಹೆಸರಲ್ಲಿ ದರೋಡೆ ಮಾಡಲಾಗಿತ್ತು.
ಬಂಧಿತ ಆರೋಪಿಯನ್ನು ಮುಂಬೈಯಲ್ಲಿ ಬಂಧಿಸಿ ಕರೆ ತಂದಿದ್ದಾರೆ.
