
ಮಂಗಳೂರು: ಉಪಕರಣಗಳ ಸಹಿತ ಮೊಬೈಲ್ ಟವರ್ ಅನ್ನು ಕಳವು ಮಾಡಿರುವ ಘಟನೆ ಮಂಗಳೂರು ತಾಲೂಕು ತಿರುವೈಲು ಗ್ರಾಮದಲ್ಲಿ ನಡೆದಿದೆ.
ಟವರ್ನ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನೀಷಿಯನ್ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಮೊಬೈಲ್ ಟವರ್ ಮತ್ತು ಟವರ್ನ ಉಪಕರಣಗಳು ಸೇರಿದಂತೆ ಒಟ್ಟು ಸುಮಾರು 19 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ. ಮುಂಬಯಿಯ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಜಿ.ಟಿ.ಎಲ್. ಇನ್ಫ್ರಾಸ್ಟ್ರಕ್ಚರ್ ಕಂಪೆನಿ ಲಿ.ನವರು ಮೊಬೈಲ್ ಟವರ್ ನಿರ್ಮಾಣ ಮಾಡಿದ್ದರು.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
