ಮಂಗಳೂರು: ಜಿಲ್ಲೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಇಂದು ಮಂಗಳವಾರವೂ ಕೂಡ ಅದೇ ಪರಿಸ್ಥಿತಿ ಮುಂದುವರಿದಿದೆ.
ಮಂಗಳೂರು ನಗರ, ಬೆಳ್ತಂಗಡಿ, ಸುಳ್ಯ ತಾಲೂಕಿನ ಹಲವೆಡೆ ಮಳೆಯಾಗಿದೆ. ಕರಾವಳಿಗೆ ಎರಡು ದಿನ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 15 ರಂದು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಚಾಮರಾಜನಗರ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
