
ಹೊಸದಿಲ್ಲಿ: ದೇಶದಾದ್ಯಂತ ಜೂನ್ 18ರಂದು ನಡೆದಿದ್ದ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಶಿಕ್ಷಣ ಸಚಿವಾಲಯ ಬುಧವಾರ ಆದೇಶ ಹೊರಡಿಸಿದೆ. ಪರೀಕ್ಷೆಯಲ್ಲಿ ಅಕ್ರಮ ನಡದಿದೆ ಎನ್ನುವ ಕಾರಣಕ್ಕೆ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿರುವ ಈ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ನ್ಯಾಶನಲ್ ಸೈಬರ್ ಕ್ರೈಮ್ ಅನಾಲಿಟಿಕ್ಸ್ ಘಟಕವು ನೀಡಿರುವ ಮಾಹಿತಿ ಹಿನ್ನೆಲೆ ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಪರಿಕ್ಷೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ ಎನ್ನಲಾಗಿದೆ.
ಇನ್ನು, ದೇಶದಾದ್ಯಂತ 317 ನಗರಗಳಲ್ಲಿ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದ್ದು, 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಪರೀಕ್ಷೆ ನಡೆದ ಒಂದೇ ದಿನದಲ್ಲಿ ಪರೀಕ್ಷೆ ರದ್ದುಗೊಳಿಸಿರುವ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಬೇಸರವನ್ನುಂಟು ಮಾಡಿದೆ.
