Home ಸುದ್ದಿಗಳು ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಆರೋಪಿಗಳ ಪತ್ತೆಗೆ ಸಿಎಂ ಖಡಕ್ ಸೂಚನೆ

ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಆರೋಪಿಗಳ ಪತ್ತೆಗೆ ಸಿಎಂ ಖಡಕ್ ಸೂಚನೆ

Micro Finance Bill enacted by Ordinance

ಮಂಗಳೂರು: ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಳ್ಳಿದಲ್ಲಿ ಆರೋಪಿಗಳ ಪತ್ತೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಖಡಕ್ ಸೂಚನೆ ನೀಡಿದ್ದಾರೆ.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.

ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದರು.

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದರು.

 
Previous articleನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಬೈಕ್: ವಿದ್ಯಾರ್ಥಿ ಸಾವು
Next articleಕಿನ್ನಿಮೂಲ್ಕಿ ಬಳಿ ಅನಿಲ ತುಂಬಿದ ಟ್ಯಾಂಕರ್‌ ಪಲ್ಟಿ