Home ಸುದ್ದಿಗಳು ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

0
ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ದೆಹಲಿ: ಹಲವು ದಿನಗಳಿಂದ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯೇಂದ್ರ ವಿರುದ್ಧ ಹೊಸ ಆರೋಪ ಮಾಡಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ನನಗೆ ಈ ವರೆಗೂ ಅಧಿಕೃತವಾಗಿ ಪಕ್ಷದ ಕೇಂದ್ರ ಸಮಿತಿಯಿಂದ ನೊಟೀಸ್ ಬಂದಿಲ್ಲ, ವಾಟ್ಸ್ ಆಪ್ ನಲ್ಲಿ ನೊಟೀಸ್ ಬಂದಿದೆ. ವಾಟ್ಸ್ ಆಪ್ ನಲ್ಲಿ ಬಂದಿರುವುದನ್ನು ಹೇಗೆ ನಂಬಲಿ? ಅಧಿಕೃತವಾಗಿ ನೊಟೀಸ್ ಬಂದ ಬಳಿಕ ಸರಿಯಾದ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.

ನನಗೆ ಬಂದಿರುವ ನೊಟೀಸ್ ನಕಲಿ ಎಂದೆನಿಸುತ್ತಿದೆ. ವಿಜಯೇಂದ್ರ ಅವರಪ್ಪನ ಸಹಿ ಮಾಡಿ ಕಡತಗಳನ್ನು ರವಾನಿಸಿರುವ ಉದಾಹರಣೆಗಳಿವೆ. ಈ ಬಗ್ಗೆ ಹರಿಪ್ರಸಾದ್ ಆರೋಪ ಮಾಡಿದ್ದರು ಎಂದು ಯತ್ನಾಳ್ ಹೊಸ ಆರೋಪ ಮಾಡಿದ್ದಾರೆ.

ನಾನು ಸ್ವಂತ ಸಾಮರ್ಥ್ಯದ ಮೇಲೆ ನಾಯಕನಾಗಿದ್ದೀನಿ. ಯಡಿಯೂರಪ್ಪ ಭಯದಿಂದ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ ಎಂದರು.

 

LEAVE A REPLY

Please enter your comment!
Please enter your name here