
ಮಂಗಳೂರು: ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿರುದ್ದ ದಾಖಲಿಸಲಾಗಿದ್ದ ಚುನಾವಣ ನೀತಿ ಸಂಹಿತೆ ಉಲ್ಲಂಘನೆಯ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿದ ಆರೋಪ ಹಾಗೂ ಚುನಾವಣ ಅಧಿಕಾರಿಗಳ ಅನುಮತಿ ಪಡೆಯದೇ ಕಾರ್ಯಕ್ರಮ ಆಯೋಜಿಸಿದ ಕಾರಣಕ್ಕಾಗಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್ ಮತ್ತು ತ್ರಿಶಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್. ಎಸ್. ಗೋಪಾಲಕೃಷ್ಣ ಅರ್ಜಿ ಸಲ್ಲಿಸಿದ್ದರು.
ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಿತು ಪ್ರಕರಣ ರದ್ದುಪಡಿಸಲು ಆದೇಶಿಸಿತು.
