Home ಸುದ್ದಿಗಳು ರಾಜ್ಯಪಾಲರು ಬದಲಾವಣೆಗೆ ಸೂಚನೆ ಕೊಟ್ಟರೆ ಮೈಕ್ರೋ ಫೈನಾನ್ಸ್ ಬಿಲ್‌ನಲ್ಲಿ ಬದಲಾವಣೆ ಮಾಡುತ್ತೇವೆ: ಜಿ.ಪರಮೇಶ್ವರ್

ರಾಜ್ಯಪಾಲರು ಬದಲಾವಣೆಗೆ ಸೂಚನೆ ಕೊಟ್ಟರೆ ಮೈಕ್ರೋ ಫೈನಾನ್ಸ್ ಬಿಲ್‌ನಲ್ಲಿ ಬದಲಾವಣೆ ಮಾಡುತ್ತೇವೆ: ಜಿ.ಪರಮೇಶ್ವರ್

We will make changes in the Micro Finance Bill

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ತರಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಸಹಿ ಹಾಕುವ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ ತಿಳಿಸಿದ್ದಾರೆ.

ಸುಗ್ರೀವಾಜ್ಞೆಗೆ ಅವರು, ರಾಜ್ಯಪಾಲರಿಗೆ ಈಗಾಗಲೇ ಕರಡು ಕಳಿಸಲಾಗಿದೆ. ಇವತ್ತು ಸಹಿ ಹಾಕಬಹುದು ಎಂಬ ನಿರೀಕ್ಷೆ ಇದೆ. ರಾಜ್ಯಪಾಲರು ಅವರ ಕಾನೂನು ತಜ್ಞರ ಜೊತೆ ಮಾತನಾಡಿ ಅಂತಿಮವಾಗಿ ಸಹಿ ಹಾಕಬಹುದು. ಅವರು ಸಹಿ ಹಾಕಿದರೆ ಇವತ್ತು ಸುಗ್ರೀವಾಜ್ಞೆ ಜಾರಿಯಾಗಬಹುದು ಎಂದರು.

ಒಂದು ವೇಳೆ ರಾಜ್ಯಪಾಲರು ಕೆಲ ಅಂಶಗಳ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡಿ ಕಳುಹಿಸುತ್ತೇವೆ ಎಂದು ತಿಳಿಸಿದರು.

 
Previous articleಎಲ್ಲ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ: ವಿಜಯೇಂದ್ರ ವಿರುದ್ಧ ಕಿಡಿಕಾರಿದ ಬಸನಗೌಡ ಪಾಟೀಲ್ ಯತ್ನಾಳ್
Next articleಹೆಚ್ಚು ಸಾಲ ವಸೂಲಿ: ಬ್ಯಾಂಕ್​ಗಳ ವಿರುದ್ಧ ಕರ್ನಾಟಕ ಹೈಕೋರ್ಟ್​ ಮೆಟ್ಟಿಲೇರಿದ ವಿಜಯ್ ಮಲ್ಯ