
ಕಾರ್ಕಳ: ಸಾರ್ವಜನಿಕ ರಸ್ತೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪಹರಿಸಿದ ಘಟನೆ ಬೋಳ ಗ್ರಾಮದ ಸುಂಕಮಾರು-ಮಂಜರಪಲ್ಕೆ ಎಂಬಲ್ಲಿ ನಡೆದಿದೆ.
ಮನೆಗೆ ನಡೆದುಕೊಂಡು ಹೋಗುತ್ತಿದ್ದ ವಸಂತಿ ಎಂಬವರ ಚಿನ್ನದ ಸರವನ್ನು ಕಳ್ಳರು ಅಪಹರಿಸಿ ಪರಾರಿಯಾಗಿದ್ದಾರೆ.
ಬೈಕ್‌ನಲ್ಲಿ ಬಂದಿದ್ದ ಯುವಕ ಮತ್ತು ಯುವತಿ, ಭಾಸ್ಕರ್ ಅವರ ಮನೆ ಎಲ್ಲಿ ಬರುತ್ತದೆ ಎಂದು ಕೇಳಿದ್ದಾರೆ.
ಇಲ್ಲಿ ಭಾಸ್ಕರ ಎನ್ನುವವರು ಯಾರೂ ಇರುವುದಿಲ್ಲ ಎಂದು ಹೇಳಿದಾಗ ಬೈಕ್‌ನಲ್ಲಿ ಹಿಂದೆ ಕುಳಿತಿದ್ದ ಯುವತಿ, ಮಹಿಳೆಯ ಕೈ ಹಿಡಿಯಲು ಮುಂದಾಗಿದ್ದು, ಬೈಕ್ ಸವಾರ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದುಕೊಂಡು ಇಬ್ಬರೂ ಬೈಕಿನಲ್ಲಿ ಪರಾರಿಯಾಗಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
