
ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಆರಂಭವಾಗಿದೆ. ರಾಜ್ಯದ ಹಲವೆಡೆ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಜೂನ್ ತಿಂಗಳ ಅಂತ್ಯದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಕಳೆದೆರಡು ದಿನಗಳಿಂದ ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜೂನ್ 27 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯಲ್ಲೋ ಅಲಟ್ ಘೋಷಿಸಲಾಗಿದ್ದು, ಕೊನೆಗೆ ವರುಣರಾಯನ ಅಬ್ಬರ ಆಅರಂಭವಾಗಿರುವುದಕ್ಕೆ ರೈತರು ಸಂತಸದಿಂದಿದ್ದಾರೆ.
