
ಗಂಗಾವತಿ: ಶಾಸಕ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಅರುಣಾ ಲಕ್ಷ್ಮೀ ರೆಡ್ಡಿ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಶಾಕ್ ಕೊಟ್ಟಿದೆ. ಗಂಗಾವತಿಯಿಂದ ಕೆಆರ್ಪಿ ಪಕ್ಷದಿಂದ ಸ್ಪಧಿಸಿ ಗೆದ್ದಿದ್ದ ಗಾಲಿ ಜನಾರ್ದನ ರೆಡ್ಡಿ ದಂಪತಿಗೆ ಅವರ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋಟ್ ಆದೇಶಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಕೋರ್ಟ್ ಕ್ರಿಮಿನಲ್ ಕೇಸ್ ಮುಗಿಯುವವರೆಗೆ 77ಆಸ್ತಿಗಳನ್ನು ಮುಟ್ಟುಗೋಲು ಹಾಕುವಂತೆ ಸೂಚಿಸಿದೆ. ಈ ಹಿನ್ನೆಲೆ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶಿಸಲಾಗಿದೆ.
