
ಮಹಾರಾಷ್ಟ್ರ: ಇದ್ದಕ್ಕಿಂದ್ದಂತೆ 6ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡು 25 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾಗ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ಗೆ ಬೆಂಕಿ ಬಿದ್ದಿರುವ ಸುದ್ದಿ ತಿಳಿದು ಅಗ್ನಿಶಾಮಕ ದಳದೊಂದಿಗೆ ದೌಡಾಯಿಸಿದ ಪೊಲೀಸರು ರಕ್ಷಣಾ ಕಾಯಾಚರಣೆ ಕೈಗೊಂಡಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಜನರು ಪ್ರಯಾಣಿಸುತ್ತಿದ್ದು, 25 ಜನ ಸಜೀವ ದಹನಗೊಂಡರೆ, 8 ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
