
ನವದೆಹಲಿ: ಟ್ವಿಟರ್ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸುವುದಾಗಿ ಬೆದರಿಕೆ ಹಾಕಿತ್ತು ಎಂಬ ಟ್ವಿಟರ್ ಮಾಜಿ ಸಿಇಒ ಜಾಕ್ ಡೋಸೆ ಹೇಳಿಕೆಯನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಳ್ಳಿ ಹಾಕಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ರಾಜೀವ್ ಚಂದ್ರಶೇಖರ್, ದೇಶದಲ್ಲಿ ಟ್ವಿಟರ್ ಸಂಸ್ಥೆಯನ್ನು ಯಾರು ಕೂಡ ಮುಚ್ಚಿಲ್ಲ ಅಥವಾ ಸಂಸ್ಥೆಯ ಯಾರೂ ಕೂಡ ಜೈಲಿಗೆ ಹೋಗಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಇದು ಸಂಶಯಾಸ್ಪದ ನಡೆಯ ಪ್ರತೀಕ ಎಂದು ವಾಗ್ದಾಳಿ ನಡೆಸಿದ್ದಾರೆ.
