
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನೀಡಿರುವ 5ಗ್ಯಾರಂಟಿಗಳಲ್ಲಿ ಒಂದಾದ ಕುಟುಂಬದಲ್ಲಿನ ಮಹಿಳಾ ಯಜಮಾನಿಗೆ 2000ರೂ ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಸೇವಾ ಸಿಂಧು ಪೋಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗೃಹಲಕ್ಷ್ಮೀ ಯೋಜನೆಯಡಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ನಾಳೆ ಮಧ್ಯಾಹ್ನ 1:30ಕ್ಕೆ ಶಕ್ತಿಭವನದಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದು, ಆಗಸ್ಟ್ 18ರಂದು ಬೆಳಗಾವಿಯಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದಿದ್ದಾರೆ.
