
ಉಡುಪಿ: ಮೀನುಗಾರರ ಸುರಕ್ಷತೆ ಹಾಗೂ ಮೀನುಗಾರಿಕೆ ವಿಸ್ತರಣೆ ಮತ್ತು ಬೆಂಬಲ ಸೇವೆ ಸೌಲಭ್ಯ ಪಡೆಯುವ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು, ಕೇಂದ್ರ ಸಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಗೆ ಆಸಕ್ತ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಅರ್ಜಿ ನಮೂನೆಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಕುಂದಾಪುರ, ಉಡುಪಿ ಹಾಗೂ ಕಾಕಳ ಕಚೇರಿ ಹಾಗೂ ಮೀನುಗಾರಿಕೆ ನಿರ್ದೇಶಕರು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸೂಚಿಸಿದ್ದಾರೆ.
