ಉಡುಪಿ: ಈ ಬಾರಿ ಮಳೆ ಕೊಂಚ ತಡವಾಗಿ ಆಗಮಿಸಿದ್ದು, ಕರ್ನಾಟಕಕ್ಕೆ ಇಂದು ಮುಂಗಾರು ಪ್ರವೇಶಿಸುತ್ತಿದೆ. ಈ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿಯೂ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
