Home ಕರ್ನಾಟಕ ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಗೆ ಉತ್ತಮ ರೆಸ್ಪನ್ಸ್:‌ ಈವರೆಗೆ 77 ಲಕ್ಷಕ್ಕೂ ಅಧಿಕ ಅರ್ಜಿ ಸಲ್ಲಿಕೆ

ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಗೆ ಉತ್ತಮ ರೆಸ್ಪನ್ಸ್:‌ ಈವರೆಗೆ 77 ಲಕ್ಷಕ್ಕೂ ಅಧಿಕ ಅರ್ಜಿ ಸಲ್ಲಿಕೆ

0
ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಗೆ ಉತ್ತಮ ರೆಸ್ಪನ್ಸ್:‌ ಈವರೆಗೆ 77 ಲಕ್ಷಕ್ಕೂ ಅಧಿಕ ಅರ್ಜಿ ಸಲ್ಲಿಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಲಾಗಿದ್ದ 5 ಭರವಸೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಈಗಾಗಲೇ ಚಾಲನೆ ದೊರೆತಿದೆ. ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಸಲಾಗಿದೆ. ಜನರು ನೂಕು ನುಗ್ಗಲಿನಲ್ಲಿ ಬಂದು ಅರ್ಜಿ ಸಲ್ಲಿಸುತ್ತಿದ್ದಾರೆ. ಸರ್ವರ್ ಸಮಸ್ಯೆಯೂ ಕೂಡ ಕಡಿಮೆಯಾಗಿದ್ದು, ಈವರೆಗೆ ಒಟ್ಟು 77 ಲಕ್ಷಕ್ಕೂ ಅಧಿಕ ಜನರು ಗೃಹಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ.
ಗೃಹಜ್ಯೋತಿ ಯೋಜನೆಗೆ ರಾಜ್ಯದಲ್ಲಿ ಈಗಾಗಲೇ ಉತ್ತಮ ರೆಸ್ಪಾನ್ಸ್‌ ದೊರಕುತ್ತಿದ್ದು, ಈವರೆಗೆ ಒಟ್ಟು 77,20,207 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ.
ಇನ್ನು, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸೈಬರ್‌ ಗಳಲ್ಲಿ ಹಣವನ್ನು ತೆಗೆದುಕೊಳ್ಳುವಂತಿಲ್ಲ. ಒಂದು ವೇಳೆ ತೆಗೆದುಕೊಂಡಲ್ಲಿ ಅಂತಹ ಸೈಬರ್‌ ಗಳ ಲೈಸನ್ಸ್‌ ಅನ್ನು ರದ್ದುಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆಯನ್ನು ನೀಡಿದ್ದಾರೆ. ಅರ್ಜಿಗಳನ್ನು ಕೇವಲ ಆನ್‌ಲೈನ್‌ಮೂಲಕ ಮಾತ್ರ ಅಲ್ಲದೇ ಇಂಧನ ಇಲಾಖೆಯಿಂದ ಬಿಡುಗಡೆ ಮಾಡಿರುವ ಕ್ಯೂರ್‌ಸ್ಕ್ಯಾನ್‌ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯ ಕುರಿತು ಏನಾದರೂ ಅನುಮಾನಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

 

LEAVE A REPLY

Please enter your comment!
Please enter your name here