
ಬೆಂಗಳೂರು: ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ತಡವಾಗಿ ಮಳೆ ಬಂದರೂ ಕೂಡ ಅಪಾರ ಜೀವಹಾನಿ, ಮನೆ ಹಾನಿ, ಬೆಳೆ ಹಾನಿಯಂತಹ ಪ್ರಕರಣಗಳು ಸಂಭವಿಸಿವೆ. ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 13 ರವೆರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿಗೆ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
