
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭ ನೀಡಿದ್ದ 5 ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ. ಈ ಹಿನ್ನೆಲೆ ಮಹಿಳೆಯರು ಮನಸೋ ಇಚ್ಛೆ ತಿರುಗಾಡುತ್ತಿದ್ದಾರೆ. ವೀಕೆಂಡ್ ಬಂದ್ರೆ ಸಾಕು ದೇವಾಲಯಗಳಿಗೆ, ಪ್ರವಾಸಿ ತಾಣಗಳಿಗೆ ತಿರುಗಾಡಲು ಹೋಗುತ್ತಿದ್ದಾರೆ. ಈ ಯೋಜನೆಯಿಂದಾಗಿ ಪುರುಷರಿಗೆ ಬಸ್ ನಲ್ಲಿ ಸಾಕಷ್ಟು ತೊಂದರೆಯಾಗುತ್ತಿರುವುದರ ಬಗ್ಗೆ ಸಾಕಷ್ಟು ಸುದ್ದಿಯಾಗಿತ್ತು. ಇದೀಗ ಈ ಯೋಜನೆಯಿಂದಾಗಿ ವಿದ್ಯಾರ್ಥಿಗಳೂ ಕೂಡ ಸಂಕಷ್ಟ ಎದುರಿಸುವಂತಾಗಿದೆ. ಈ ಹಿನ್ನೆಲೆ ರಾಜ್ಯದ ವಿವಿಧೆಡೆ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದಾರೆ.
ಹೌದು, ಶಕ್ತಿ ಯೋಜನೆಯಿಂದಾಗಿ ಬಸ್ ಫೂಲ್ ರಶ್ ಆಗುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ಗಳು ಕೂಡ ಬರುತ್ತಿಲ್ಲ ಹೀಗಾಗಿ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಸಮಸ್ಯೆಯಾಗುತ್ತಿದೆ ಎಂದು ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಒಟ್ಟಾರೆಯಾಗಿ ಶಕ್ತಿ ಯೋಜನೆಯಿಂದಾಗಿ ಅನೇಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಸರ್ಕಾರ ಕೂಡ ಇಂತಹ ಸಮಸ್ಯೆಗಳನ್ನು ತಡೆಗಟ್ಟಲು ಶಕ್ತಿ ಯೋಜನೆಗೆ ಕೆಲವೊಂದು ಷರತ್ತುಗಳನ್ನು ಹಾಕುವ ಯೋಜನೆ ಹಮ್ಮಿಕೊಂಡಿದೆ ಎನ್ನಲಾಗಿದೆ.
