ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಾಗಿ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕ ಯುವತಿ ಸಾವಿನ ಕದ ತಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ.
ಮೃತರನ್ನು ಗುಂಡ್ಲುಪೇಟೆಯ ಚಂದ್ರಶೇಖರ್ ಹಾಗೂ ಗೋಕಾಕ್‌ನ ಸುಧಾರಾಣಿ ಎಂದು ಗುರುತಿಸಲಾಗಿದೆ. ಶೀಘ್ರದಲ್ಲೇ ಮದುವೆಯಾಗಬೇಕಿದ್ದ ಸ್ನಾನ ಮಾಡಲು ಗ್ಯಾಸ್ ಗೀಸರ್ ಆನ್ ಮಾಡಿ ಬಾತ್‌ರೂಮ್ ಗೆ ಹೋಗಿದ್ದಾರೆ. ಈ ವೇಳೆ ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿದ್ದು, ಇಬ್ಬರೂ ಪ್ರಜ್ಞೆ ತಪ್ಪಿ ಕುಸಿದು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆಯಿಂದ ಯಾರೂ ಹೊರಗೆ ಬಾರದ ಕಾರಣ ಅನುಮಾನಗೊಂಡ ಮನೆ ಮಾಲೀಕ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಜೂನ್ 10ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
