Home ಸುದ್ದಿಗಳು ರಾಷ್ಟ್ರೀಯ ಸ್ಯಾನ್‌ ಫ್ರಾನ್ಸಿಸ್ಕೋ ನಗರದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ

ಸ್ಯಾನ್‌ ಫ್ರಾನ್ಸಿಸ್ಕೋ ನಗರದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ

0
ಸ್ಯಾನ್‌ ಫ್ರಾನ್ಸಿಸ್ಕೋ ನಗರದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ

ನವದೆಹಲಿ: ಸ್ಯಾನ್‌ ಫ್ರಾನ್ಸಿಸ್ಕೋ ನಗರದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದೆ. ಈ ಕೃತ್ಯವನ್ನು ಭಾರತ ಸಕಾರ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದೆ.


ಈ ಬಗ್ಗೆ ಟ್ವಿಟರ್‌ ನಲ್ಲಿ ವಿಡಿಯೋವನ್ನು ಪೋಸ್ಟ್‌ ಮಾಡಲಾಗಿದ್ದು, ಇದರಲ್ಲಿ ಜುಲೈ 2 ರಂದು ಖಲಿಸ್ತಾನಿ ಬೆಂಬಲಿಗರು ಭಾರತೀಯ ದೂತವಾಸ ಕಚೇರಿಗೆ ಬೆಂಕಿ ಹಚ್ಚಿರುವ ಕುರಿತು ತೋರಿಸಲಾಗಿದೆ. ಇದರಲ್ಲಿ ಹಿಂಸಾಚಾರವು ಹಿಂಸೆಯನ್ನು ಹುಟ್ಟುಹಾಕುತ್ತದೆ ಎಂದು ಕೂಡ ಹೇಳಲಾಗಿದೆ ಎನ್ನಲಾಗಿದೆ.
ಇನ್ನು, ಖಲಿಸ್ತಾನಿಗಳ ಈ ಕೃತ್ಯವನ್ನು ಅಮೇರಿಕ ಕೂಡ ಖಂಡಿಸಿದ್ದು, ಈ ಕೃತ್ಯವನ್ನು ಯುಎಸ್‌ ಕೂಡ ಖಂಡಿಸುತ್ತದೆ ಎಂದು ಹೇಳಿದೆ.ಈ ಬಗ್ಗೆ ಟ್ವೀಟ್‌ ಮಾಡಿರುವ ಮ್ಯಾಥ್ಯೂ ಮಿಲ್ಲರ್‌, ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತವಾಸ ಕಚೇರಿಯ ಮೇಲೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿರುವುದನ್ನು ಯುಎಸ್‌ ಖಂಡಿಸುತ್ತದೆ ಎಂದು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here