
ದಿ ಓವಲ್ ಮೈದಾನದಲ್ಲಿ ನಡೆದ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಭಾರತ ಸೋಲನ್ನನುಭಿವಿಸಿದರೆ, ಆಸ್ಟ್ರೇಲಿಯಾ ಗೆಲುವನ್ನು ಸಾಧಿಸಿದೆ.
ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧ 209ರನ್ ಗಳ ಮೂಲಕ ಹೀನಾಯ ಸೋಲು ಕಂಡಿದೆ.
ಕಳೆದ ಬಾರಿ ನ್ಯೂಜಿಲ್ಯಾಂಡ್ ವಿರುದ್ಧ ಫೈನಲ್ ಪಂದ್ಯದಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಇದೀಗ ಆಸ್ಟ್ರೇಲಿಯಾ ತಂಡದ ಎದುರು ಕೂಡ ಹೀನಾಯ ಸೋಲನ್ನು ಅನುಭವಿಸುವ ಮೂಲಕ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದೆ. ಕಳೆದ 10ವಷಗಳಿಂದ ಭಾರತದ ಗೆಲುವಿಗಾಗಿ ಹಾತೊರೆಯುತ್ತಿದ್ದ ಅಭಿಮಾನಿಗಳಿಗೆ ಈ ಬಾರಿಯೂ ಕೂಡ ನಿರಾಸೆ ಉಂಟಾಗಿದ್ದು, ಅಭಿಮಾನಿಗಳಿಂದ ಟೀಂ ಇಂಡಿಯಾಗೆ ಟೀಕೆಗಳ ಸುರಿಮಳೆಯೇ ಸುರಿಯುತ್ತಿದೆ.
