ಲಂಡನ್: ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಚಾಲನೆ ದೊರೆತಿದ್ದು, ಭಾರತ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರರು ಕಪ್ಪುಪಟ್ಟಿ ತೊಟ್ಟು ಮೈದಾನಕ್ಕಿಳಿದಿದ್ದಾರೆ.
ಒಡಿಶಾದಲ್ಲಿ ನಡೆದ ಭಾರೀ ರೈಲು ದುರಂತದ ಹಿನ್ನೆಲೆಯಲ್ಲಿ ಮಡಿದವರಿಗೆ ಸಂತಾಪ ಸೂಚಿಸುವ ದೃಷ್ಟಿಯಿಂದ ಆಟಗಾರರು ಕಪ್ಪು ಪಟ್ಟಿ ತೊಟ್ಟಿದ್ದಾರೆ.
