ಪುತ್ತೂರು: ಇಲ್ಲಿನ ಕಬಕದಲ್ಲಿ ಆರಂಭಗೊಳ್ಳಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಸುಮಾರು 22.5 ಎಕ್ರೆ ಜಾಗ ಮಂಜೂರಾಗಿದ್ದು, ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು.
ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ಶಾಸಕ ಅಶೋಕ್ ರೈ ಮಾತನಾಡಿ ಪುತ್ತೂರಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆರಂಭಗೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ಟೇಡಿಯಂ ಕಾರಣಕ್ಕೆ ಪುತ್ತೂರು ಮುಂದಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ ಎಂದರು.
