
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಜು.17ರವೆರೆಗೆ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿ ಆದೇಶಿಸಿದೆ. ಏಕಸದಸ್ಯ ನ್ಯಾಯಪೀಠದ ತೀಪಿಗೆ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
2017ರಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ ಮನೆ ಹಾಗೂ ವಿವಿಧ ಕಚೇರಿಗಳ ಮೇಲೆ ದಾಳಿ ನಡೆಸಿದಾಗ 8.59ಕೋಟಿ ಹಣ ಸಿಕ್ಕಿರುತ್ತದೆ. ಈ ಬೆನ್ನಲ್ಲೇ ಅವರನ್ನು 2019ರಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಬಂಧಿಸಿರುತ್ತಾರೆ. ಅಲ್ಲದೇ ಈ ವೇಳೆ ಇ.ಡಿ ಅಧಿಕಾರಿಗಳು ಬರೆದಿರುವ ಪತ್ರದ ಆಧಾರದ ಮೇಲೆ ಅಂದಿನ ಸಕಾರವು ಸಿಬಿಐಗೆ ಒಪ್ಪಿಸಿ ತನಿಖೆ ಮಾಡಲು ಸೂಚಿಸಿತ್ತು. ಈ ಆದೇಶವನ್ನು ರದ್ದು ಪಡಿಸಲು ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಹಿನ್ನೆಲೆ ಸಿಬಿಐ ತನಿಖೆ ರದ್ದುಕೋರಿ ಡಿ.ಕೆ.ಶಿವಕುಮಾರ್ ಅವರು ಹೈಕೋರ್ಟ್ಗೆ ಸಲ್ಲಿಸಿದ್ದರು. ಇದೀಗ ಹೈಕೋಟ್ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿದೆ.
