
ಬೆಂಗಳೂರು: ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಾಮರಾಜ ನಗರ, ಉತ್ತರಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಯಲ್ಲೋ ಅಲಟ್ ಘೊಷಿಸಲಾಗಿದೆ. ಇನ್ನು, ಕರಾವಳಿಯ ಬಹುತೇಕ ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.
