
ಉಡುಪಿ: ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಕಾರಿನಲ್ಲಿ ಸಂಚರಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಬ್ರಿ ಸಮೀಪದ ಸೀತಾನದಿ ಎಂಬಲ್ಲಿ ನಡೆದಿದೆ.
ಮೃತರನ್ನು ಉಡುಪಿ ಶಿಕ್ಷಣ ಇಲಾಖೆಯ ಸಹಾಯಕರಾಗಿ ಕತವ್ಯ ನಿವಹಿಸುತ್ತಿದ್ದ ಸುಬ್ಬಣ್ಣ ಗಾನೀಗ ಹಾಗೂ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ ಸೋಮಶೇಖರ್ ಎಂದು ಗುರುತಿಸಲಾಗಿದೆ.
ಸ್ನೇಹಿತನ ಮದುವೆಗೆ ತೆರಳಿದ್ದ ನಾಲ್ವರು ಕಾಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿರುವ ವೇಳೆ ಹೆಬ್ರಿ ಸಮೀಪದ ಸೀತಾನದಿ ಬಳಿ ಆಗುಂಬೆ ಕಡೆಗೆ ಹೋಗುತ್ತಿದ್ದ ಮಿನಿ ಬಸ್ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
