Home Uncategorized ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು ದಾಖಲು

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು ದಾಖಲು

Businessman Vijay Tata has filed a complaint against Union Minister HD Kumaraswamy

ಬೆಂಗಳೂರು: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಆರೋಪಿಸಿದ್ದಾರೆ. ಕುಮಾರಸ್ವಾಮಿ ಹಾಗೂ ರಮೇಶ್ ​ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ಘಟನೆ ಏನು: ಜೆಡಿಎಸ್ ಮುಖಂಡ ರಮೇಶ್ ಗೌಡ ನಮ್ಮ ಮನೆಗೆ ಬಂದಿದ್ದರು. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆ ನಿಲ್ಲುತ್ತಿದ್ದಾರೆ ಎಂದಿದ್ದರು. ಅದೇ ವೇಳೆ, ಹೆಚ್​​ಡಿ ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿ, ಚುನಾವಣೆಗಾಗಿ 50 ಕೋಟಿ ರೂಪಾಯಿ ಹಣ ನೀಡುವಂತೆ ನನ್ನನ್ನು ಕೇಳಿದ್ದರು. ನಾನು ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು.

ಹಣ ಕೊಡುವುದಿಲ್ಲ ಎಂದಿದ್ದಕ್ಕೆ, ನಿಮ್ಮ ಪ್ರಾಜೆಕ್ಟ್ ಕಂಪ್ಲೀಟ್ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ದೇವಸ್ಥಾನ ಕಟ್ಟಲು ರಮೇಶ್ ಗೌಡ ಕೂಡ 5 ಕೋಟಿ ರೂಪಾಯಿ ಕೇಳಿದ್ದರು. ತುಂಬಾ ಕಷ್ಟವಿದೆ ಯಾವುದೇ ಕಾರಣಕ್ಕೂ ಹಣ ಕೊಡಲ್ಲ ಅಂದಿದ್ದೆ ಎಂದು ಹೇಳಿದ್ದಾರೆ.

 
Previous articleಜಪಾನ್‍: 2ನೇ ಮಹಾಯುದ್ದದ ಕಾಲದ ಬಾಂಬ್ ಸ್ಫೋಟ
Next articleನವರಾತ್ರಿ ಮೊದಲ ದಿನ: ಶೈಲಪುತ್ರಿಯ ಪೂಜೆ ಮತ್ತು ದೇವಿಯ ಇತಿಹಾಸ