Home Uncategorized ಕಾರ್ಕಳ: ಕಾಂಗ್ರೆಸ್ ಕುಟುಂಬೋತ್ಸವಕ್ಕೆ ಉಪಮುಖ್ಯಮಂತ್ರಿ ಆಗಮನ; ಪೂರ್ವಾಭಾವಿ ಸಭೆ

ಕಾರ್ಕಳ: ಕಾಂಗ್ರೆಸ್ ಕುಟುಂಬೋತ್ಸವಕ್ಕೆ ಉಪಮುಖ್ಯಮಂತ್ರಿ ಆಗಮನ; ಪೂರ್ವಾಭಾವಿ ಸಭೆ

ಕಾರ್ಕಳ : ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರು ಮತ್ತು ವಿವಿಧ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎಂ. ವೀರಪ್ಪ ಮೊಯ್ಲಿ ಇವರಿಗೆ ಅಭಿನಂದನೆ, ಸಹಾಯಧನ ವಿತರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಒಳಗೊಂಡ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ಪೂರ್ವಭಾವಿ ಸಭೆಯು ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರದಂದು ನಡೆಯಿತು.

ಕಾಂಗ್ರೆಸ್ ನಾಯಕ ಉದಯ ಕುಮಾರ್ ಶೆಟ್ಟಿ ಮುನಿಯಾಲು ಮಾತನಾಡಿ, ಡಿ‌. ಕೆ. ಶಿವಕುಮಾರ್‌ ನಮ್ಮೂರಿಗೆ ಆಗಮಿಸುತ್ತಿರುವುದು ಸಂತಸದ ಸುದ್ದಿ. ಅವರ ಭೇಟಿಯಿಂದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಲಿದೆ. ಪ್ರತಿ ಬೂತ್‌ನಿಂದ ಕಾರ್ಯಕರ್ತರು ಸ್ವಯಂಪ್ರೇರಣೆಯಿಂದ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಕಾರ್ಕಳ ಬ್ಲಾಕ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ಬ್ಲಾಕ್ ಮಟ್ಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳು ಭಾಗವಹಿಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಇದು ಕಾರ್ಯಕರ್ತರ ಉತ್ಸವದ ಕಾರ್ಯಕ್ರಮವಾಗಿದೆ. ಹಾಗಾಗಿ ಕಾರ್ಯಕ್ರಮದ ಯಶಸ್ಸಿನಲ್ಲಿ ಪಕ್ಷದ ಪ್ರತಿಯೊಬ್ಬ ಸದಸ್ಯನ ಪಾತ್ರ ಮುಖ್ಯ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿರುವ ಕಾರ್ಕಳ ಕಾಂಗ್ರೆಸ್ ಕುಟುಂಬಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸಂಪೂರ್ಣ ಬೆಂಬಲ ಹಾಗೂ ಸಹಕಾರವಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್, ಹೆಬ್ರಿ ಬ್ಲಾಕ್ ಅಧ್ಯಕ್ಷ ಗೋಪಿನಾಥ ಭಟ್, ಹಿರಿಯ ಕಾಂಗ್ರೆಸ್ ನಾಯಕ ಮಂಜುನಾಥ ಪೂಜಾರಿ ಮುದ್ರಾಡಿ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಿರಿಯಣ್ಣ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್ ಪೂಜಾರಿ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ‌ ದೇವಾಡಿಗ, ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಂಕರ್, ಜಿಲ್ಲಾ ಉಪಾದ್ಯಕ್ಷ ಸುಧಾಕರ ಕೋಟ್ಯಾನ್, ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲಿಕ್ ಅತ್ತೂರು, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ಕಾರ್ಕಳ ಬ್ಲಾಕ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ಟಲಿನೋ, ಇಂಟಕ್ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ ಹಾಗೂ ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು, ಚುನಾಯಿತ ಜನಪ್ರತಿನಿಧಿಗಳು, ಪುರಸಭಾ ಸದಸ್ಯರು ಉಪಸ್ಥಿತರಿದ್ದರು.

ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿದರು, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಬ್ಬೀರ್ ಮಿಯ್ಯಾರು ಸ್ವಾಗತಿಸಿದರು, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ವಂದಿಸಿದರು.

 

 

 

 
Previous articleಮಾ.1 -2 ರಂದು ವಕೀಲರ ಸಂಘದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ: ಟ್ರೋಫಿ ಅನಾವರಣ
Next articleಕಬಕ-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ