
ಇಂದು ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಬಹಳಷ್ಟು ಸುದ್ದಿ ಮಾಡುತ್ತಿದ್ದು ಅದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮಿಯ ಸದ್ದು ಜೋರಾಗಿಯೇ ನಡೆಯುತ್ತಿದೆ. ರಾಜ್ಯದ ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಮಾಸಿಕ 2,000 ರೂಪಾಯಿಗಳ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದ್ದು, ಸುಮಾರು 11,000 ಕೇಂದ್ರಗಳಲ್ಲಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ ಆಗಸ್ಟ್ ತಿಂಗಳಿಂದಲೇ ಮನೆಯ ಯಜಮಾನಿಗೆ ಹಣ ಬರಲು ಆರಂಭವಾಗಿದ್ದು ಆ.30ರಂದು ಈ ಯೋಜನೆಗೆ ಚಾಲನೆ ನೀಡಲಾಗಿದೆ. ಈಗಾಗಲೇ ಕೆಲವು ಫಲಾನುಭವಿಗಳ ಖಾತೆಗೆ ನೇರವಾಗಿ 2000 ರೂ. ಹಣ ಸಂದಾಯವಾಗಿದೆ.
ಯಾರಿಗೆ ಹಣ ಜಮೆ?
ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಉತ್ತೇಜನಕ್ಕಾಗಿ ಜಾರಿಗೆ ತಂದಿರುವ ಯೋಜನೆ ಇದಾಗಿದ್ದು ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ಎಂದು ನಮೂದು ಆಗಿರುವ ಮಹಿಳೆಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಯಾಗಲು ಸಾದ್ಯ ವಾಗುತ್ತದೆ.
ಈ ತಿಂಗಳ ಹಣ ಯಾವಾಗ ಜಮೆ?
ಈಗಾಗಲೇ ಕೆಲವು ಮಹಿಳೆಯರಿಗೆ ಯಾವುದೇ ಕಂತಿನ ಜಮೆ ಯಾಗಿಲ್ಲ. ಅದೇ ರೀತಿ ಕೆಲವು ಮಹಿಳೆಯರಿಗೆ ನವೆಂಬರ್ ತಿಂಗಳ ಹಣವೂ ಜಮೆಯಾಗಿಲ್ಲ. ಒಟ್ಟಿನಲ್ಲಿ ಈ ತಿಂಗಳ 15 ರ ನಂತರ ಗೃಹಲಕ್ಷ್ಮಿ ಹಣ ಜಮೆಯಾಗಲಿದೆ. ಅದೇ ರೀತಿ ಅನ್ನಭಾಗ್ಯದ ಹಣವೂ ಈ ಈ ತಿಂಗಳ 15 ರ ನಂತರ ಜಮೆಯಾಗಲಿದೆ.
ಸಹಾಯವಾಣಿ ಸಂಖ್ಯೆ
ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಳ್ಳಲು ಯೋಜನೆಯ ಹೆಲ್ಪ್ ಲೈನ್ ಸಂಖ್ಯೆಯಾದ 1902 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಅದೇ ರೀತಿ ಫಲಾನುಭವಿಯು ಹೆಚ್ಚಿನ ಮಾಹಿತಿಗೆ 1902 ಸಂಖ್ಯೆಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್ ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು.
ಅರ್ಜಿ ಹಾಕಲು ಇನ್ನೂ ಅವಕಾಶ ಇದೆ
ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಇನ್ನೂ ಕೂಡ ಅವಕಾಶ ಇದ್ದು, ಅರ್ಹ ಫಲಾನುಭವಿಗಳ ನೋಂದಣಿಗೆ ಇರುವ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ನಗರ ಸ್ಥಳೀಯ ಆಡಳಿತ ಕಚೇರಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
